
ಮಂಗಳೂರು: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡಿಕೊಂಡ ವ್ಯಕ್ತಿಯನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಡಿಕೇರಿಯ ಯೂಸುಫ್ ತಲಪಾಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರ ವಿಡಿಯೋ ಸೆರೆಹಿಡಿದಿದ್ದಾನೆ ಎಂದು ಆರೋಪಿಸಲಾಗಿದೆ. ತೊಕ್ಕೊಟ್ಟು ನಲ್ಲಿ ಬಸ್ ಹತ್ತಿದ ಯೂಸುಫ್ ಬಸ್ ಲ್ಲಿದ್ದ ಮಹಿಳೆಯದ ದೃಶ್ಯಗಳನ್ನು ತನ್ನ ಮೊಬೈಲ್ ನಲ್ಲಿ ವಿಡಿಯೋ ಮಾಡುತ್ತಿರುವುದನ್ನು ಸಹಪ್ರಯಾಣಿಕರೊಬ್ಬರು ಗಮನಿಸಿದ್ದು, ಇದನ್ನು ತಿಳಿದು ಬಸ್ ನಲ್ಲಿದ್ದವರು ಥಳಿಸಿದ್ದಾರೆ. ಬಸ್ ನಿರ್ವಾಹಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಕಂಕನಾಡಿ ಠಾಣೆ ಪೊಲೀಸರಿಗೆ ಆತನನ್ನು ಒಪ್ಪಿಸಲಾಗಿದೆ.