
ಉಡುಪಿ: ಚಾರ್ಜ್ ಗೆ ಇಟ್ಟಿದ್ದ ಮೊಬೈಲ್ ಸ್ಪೋಟಗೊಂಡು ಇಡೀ ಮನೆಗೆ ಬೆಂಕಿ ತಗಲಿ ಸುಟ್ಟು ಕರಕಲಾದ ಘಟನೆ ಕಾರ್ಕಳದ ಮರತ್ತಪ್ಪ ಶೆಟ್ಟಿ ಕಾಲೋನಿಯಲ್ಲಿ ನಡೆದಿದೆ. ಘಟನೆಯಿಂದ ಸುಮಾರು 7 ಲಕ್ಷ ರೂಪಾಯಿಯಷ್ಟು ಹಾನಿಯಾಗಿದೆ.
ಕಿಶೋರ್ ಕುಮಾರ್ ಶೆಟ್ಟಿ ಎಂಬುವರ ಮನೆಯಲ್ಲಿ ಸೋಫಾ ಮೇಲೆ ಚಾರ್ಜ್ ಗೆ ಇಟ್ಟಿದ್ದ ಮೊಬೈಲ್ ಸ್ಪೋಟಗೊಂಡಿದೆ. ಟಿವಿ, ಕಿಟಕಿ, ಫ್ಯಾನ್, ಇಂಟೀರಿಯರ್ ಬೆಂಕಿಗೆ ಆಹುತಿಯಾಗಿದೆ. ಮೊಬೈಲ್ ಸ್ಪೋಟಗೊಂಡ ವೇಳೆ ಮನೆಯಲ್ಲಿ ಎಸಿ ಆನ್ ಇದ್ದ ಕಾರಣ ಇಡೀ ಮನೆಯ ತುಂಬಾ ಬೆಂಕಿ ಆವರಿಸಿದೆ. ವಿವಿಧ ಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿದ್ದು, ನಂತರ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಲ್ಲಿ ಕಿಶೋರ್ ಕುಮಾರ್ ಶೆಟ್ಟಿಯವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.