ಭೋಪಾಲ್: ವಾಹನ ಚಲಾಯಿಸುವಾಗ ಮೊಬೈಲ್ ಬಳಸುವುದು ಅಪಾಯಕಾರಿ ಎಂಬುದು ಗೊತ್ತಿದ್ದರೂ ಮೊಬೈಲ್ ನಲ್ಲಿ ಮಾತನಾಡುತ್ತಾ ಬೈಕ್, ಕಾರು ಓಡಿಸುವುದು, ವಾಟ್ಸಪ್ ಚಾಟಿಂಗ್ ಮಾಡುತ್ತಾ ಚಲಾಯಿಸುವುದು ಮಾಡುತ್ತಲೇ ಇರುತ್ತೇವೆ. ಇಲ್ಲೋರ್ವ ಕಾರು ಚಾಲಕ ವಾಟ್ಸಾಪ್ ನಲ್ಲಿ ಚಾಟಿಂಗ್ ಮಾಡುತ್ತಾ ಕಾರು ಚಲಾಯಿಸಿ ದುರಂತಕ್ಕೀಡಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ
ಕಾರು ಚಲಾಯಿಸುತ್ತಿದ್ದ ವೇಳೆ ಚಾಲಕ ಮೊಬೈಲ್ ನಲ್ಲಿ ಚಾಟಿಂಗ್ ಮಾಡುತ್ತಿದ್ದ. ಚಾಲಕನ ನಿಯಂತ್ರಣ ತಪ್ಪಿದ ಕಾರು ನದಿಗೆ ಬಿದ್ದಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ ನ ಕೊಲಾರಾ ಪ್ರದೇಶದಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ.
ಕಾರು ತಿರುವಿನಲ್ಲಿ ನಿಯಂತ್ರಣ ತಪ್ಪಿ ನದಿಗೆ ಉರುಳಿದೆ. ಮೃತರನ್ನು ಕಾರು ಚಾಲಕ ವಿನೀತ್ (22) ಹಾಗೂ ಪಲಾಶ್ ಗಾಯಕ್ವಾಡ್ (22) ಎಂದು ಗುರುತಿಸಲಾಗಿದೆ. ಪಿಯೂಷ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರನ್ನು ವೇಗವಾಗಿ ಚಲಾಯಿಸುತ್ತಿದ್ದ ವಿನೀತ್, ಈ ವೇಳೆ ವಾಟ್ಸಪ್ ನಲ್ಲಿ ಚಾಟಿಂಗ್ ಮಾಡುತ್ತಿದ್ದ. ಸೇತುವೆ ಮೇಲೆ ತಿರುವು ಪಡೆಯಲು ಮುಂದಾದಾಗ ನಿಯಂತ್ರಣ ತಪ್ಪಿದ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದು ನದಿಗೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.