alex Certify ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಸಂಚಾರಿ ಲ್ಯಾಬ್, ಕ್ಲಿನಿಕ್ ಸೇವೆ ಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಸಂಚಾರಿ ಲ್ಯಾಬ್, ಕ್ಲಿನಿಕ್ ಸೇವೆ ಲಭ್ಯ

ಬೆಂಗಳೂರು: ರಾಜ್ಯದ 4 ಮಹಾನಗರಗಳಲ್ಲಿ ಸಂಚಾರಿ ಲ್ಯಾಬ್, ಕ್ಲಿನಿಕ್ ಸೇವೆ ಆರಂಭಿಸಲಿದ್ದು, ಇದು ಯಶಸ್ವಿಯಾದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸಂಚಾರಿ ಲ್ಯಾಬ್, ಕ್ಲಿನಿಕ್ ನಲ್ಲಿ ಔಷಧ, ಕ್ಲಿನಿಕ್, ಔಷಧ ಸಾಗಿಸಲು ರೆಫ್ರಿಜರೇಟರ್, ತುರ್ತುಚಿಕಿತ್ಸೆಗೆ ಆಮ್ಲಜನಕ, ಸಾಂಕ್ರಾಮಿಕ ರೋಗ ಪತ್ತೆ ಸೌಲಭ್ಯ, ಕನಿಷ್ಠ ಸರ್ಜರಿಗೆ ಪ್ರತ್ಯೇಕ ಹಾಸಿಗೆ ಸೇರಿದಂತೆ ವಿವಿಧ ಸೌಲಭ್ಯಗಳು ಸಂಚಾರಿ ಕ್ಲಿನಿಕ್ ನಲ್ಲಿ ಇರುತ್ತವೆ.

ಮೈಸೂರು, ಹುಬ್ಬಳ್ಳಿ-ಧಾರವಾಡ, ಕಲಬುರ್ಗಿ, ಮಂಗಳೂರಿನಲ್ಲಿ ಯೋಜನೆ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಿದ್ದು, ಯಶಸ್ವಿಯಾದಲ್ಲಿ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುತ್ತದೆ.

ರೋಟರಿ ಬೆಂಗಳೂರು ಹೈಗ್ರೌಂಡ್ಸ್, ಇನ್ಫೋಸಿಸ್ ಫೌಂಡೇಶನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ವಿಧಾನಸೌಧ ಮುಂಭಾಗದಲ್ಲಿ ಏರ್ಪಡಿಸಿದ್ದ ‘ಲ್ಯಾಬ್ ಬಿಲ್ಟ್ ಆನ್ ವೀಲ್ಸ್ – ಮೊಬೈಲ್ ಕ್ಲಿನಿಕ್’ ಉದ್ಘಾಟಿಸಿ ಮಾತನಾಡಿದ ಸಿಎಂ, ಗ್ರಾಮೀಣ ಪ್ರದೇಶದಲ್ಲಿ ಸ್ಥಳದಲ್ಲಿಯೇ ತಪಾಸಣೆ ಮತ್ತು ಚಿಕಿತ್ಸೆ ಪರಿಹಾರ ನೀಡುವ ವ್ಯವಸ್ಥೆ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಮೊಬೈಲ್ ಆಸ್ಪತ್ರೆ ಆರಂಭಿಸಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ತಪಾಸಣೆ ಕೊರತೆ ಇರುವ ಕಡೆ ಸಂಚಾರಿ ಕ್ಲಿನಿಕ್ ಗಳನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...