ಬೆಂಗಳೂರು: ಜೈಲಿನಿಂದಲೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿದಂತೆ ಓರ್ವ ಕೈದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಳಗಾವಿಯ ಹಿಂಡಲಗಾ ಕಾರಾಗೃಹದಿಂದ ಕರೆ ಮಾಡಲಾಗಿತ್ತು. ಕೈದಿಗೆ ಮೊಬೈಲ್ ಯಾರು ಕೊಟ್ಟಿದ್ದರು? ನಂಬರ್ ಹೇಗೆ ಸಿಕ್ಕಿತ್ತು? ಎಂಬುದರ ಬಗ್ಗೆ ಸಂಪೂರ್ಣ ತನಿಖೆ ನಡೆಯುತ್ತಿದೆ. ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಕೇಂದ್ರ ಕಾರಾಗೃಹಗಳಲ್ಲಿ ಜಾಮರ್ ಅಳವಡಿಸಲಾಗುವುದು. ಶೀಘ್ರದಲ್ಲಿಯೇ ಜಾಮರ್ ಅಳವಡಿಕೆಗೆ ಟೆಂಡರ್ ಕರೆಯಲಾಗುವುದು. ಈ ಮೂಲಕ ಜೈಲಿನಲ್ಲಿ ಮೊಬೈಲ್ ಬಳಸುವಂತಹ ಘಟನೆಗಳಿಗೆ ಕಡಿವಾಣ ಹಾಕುತ್ತೇವೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.