ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಮೊಬೈಲ್ ಬಳಕೆ ನಿಷೇಧಿಸಿ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗೆ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಥೋಡ್ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರ ನೋಡಿದ ಆರೋಪ ಕೇಳಿ ಬಂದಿತ್ತು. ಅಂದ ಹಾಗೆ, 2011 ರಲ್ಲೇ ಸದನದಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಹೀಗಿದ್ದರೂ ಕೂಡ ಮೊಬೈಲ್ ತರುತ್ತಿದ್ದ ಸದಸ್ಯರು ಆಗಾಗ ವೀಕ್ಷಿಸುತ್ತಿದ್ದರು. ಪ್ರಕಾಶ್ ರಾಥೋಡ್ ಪ್ರಕರಣದ ನಂತರದಲ್ಲಿ ಮೊಬೈಲ್ ಬಳಕೆಗೆ ಕಟ್ಟುನಿಟ್ಟಿನ ನಿಷೇಧ ಹೇರಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಆದೇಶ ಹೊರಡಿಸಿದ್ದಾರೆ.
ಮೊಬೈಲ್ ತಂದರೂ ಸ್ವಿಚ್ ಆಫ್ ಮಾಡಬೇಕು. ಒಂದು ವೇಳೆ ನಿಯಮ ಮೀರಿದರೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಸದಸ್ಯರು ಒಂದು ವೇಳೆ ಮೊಬೈಲ್ ನೋಡಬೇಕಿದ್ದರೆ ಸಭಾಪತಿಗಳ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಹೇಳಲಾಗಿದೆ.