ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ಖಾತೆಯಿಂದ ಕೋಟ್ಯಂತರ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಪ್ರಧಾನ ವ್ಯವಸ್ಥಾಪಕ ಸಿ.ಪಿ. ಶಿವಸ್ವಾಮಿ ಮೊಬೈಲ್ ಕಳವು ಮಾಡಲಾಗಿದೆ.
ನೆಲಮಂಗಲ ಟೌನ್ ಪೋಲಿಸ್ ಠಾಣೆಗೆ ಸಿ.ಪಿ. ಶಿವಸ್ವಾಮಿ ದೂರು ನೀಡಿದ್ದಾರೆ. ಉದ್ದೇಶಪೂರ್ವಕವಾಗಿ ಮೊಬೈಲ್ ಕಳ್ಳತನ ಮಾಡಿರುವ ಶಂಕೆ ಎಂದು ದೂರು ಅವರು ನೀಡಿದ್ದಾರೆ.
ಭೋವಿ ನಿಗಮದ ಅಕ್ರಮದ ಬಗ್ಗೆ ತನಿಖೆ ಲೋಕಾಯುಕ್ತ ಮತ್ತು ಸಿಐಡಿ ತನಿಖೆ ನಡೆಸುತ್ತಿವೆ. ಬೋವಿ ನಿಗಮದ ಪ್ರಮುಖ ದಾಖಲಾತಿ ಮೊಬೈಲ್ ನಲ್ಲಿ ಇವೆ. ಕುಣಿಗಲ್ ಸರ್ಕಲ್ ನಲ್ಲಿ ಬಸ್ ಗೆ ಕಾಯುತ್ತಿದ್ದಾಗ ಮೊಬೈಲ್ ಕಳ್ಳತನ ಮಾಡಲಾಗಿದೆ. ಉದ್ದೇಶಪೂರ್ವಕವಾಗಿ ಮೊಬೈಲ್ ಕದ್ದಿರುವ ಶಂಕೆ ಇದೆ ಎಂದು ದೂರು ನೀಡಿದ್ದಾರೆ. ಭೋವಿ ನಿಗಮದ ಪ್ರಧಾನ ವ್ಯವಸ್ಥಾಪಕರ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಟೌನ್ ಪೋಲೀಸರು ತನಿಖೆ ಕೈಗೊಂಡಿದ್ದಾರೆ.