alex Certify ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮೋದಿ, ಅಮಿತ್ ಶಾ ತೀರ್ಮಾನ ಮಾಡ್ತಾರೆ : ಮಾಜಿ ಸಿಎಂ ಬಿಎಸ್ ವೈ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮೋದಿ, ಅಮಿತ್ ಶಾ ತೀರ್ಮಾನ ಮಾಡ್ತಾರೆ : ಮಾಜಿ ಸಿಎಂ ಬಿಎಸ್ ವೈ ಹೇಳಿಕೆ

ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಕುರಿತಂತೆ ಪ್ರಧಾನಿ ಮೋದಿ, ಅಮಿತ್ ಶಾ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಕೇಂದ್ರ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ. ಅವರ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವುದು ನಮ್ಮ ಗುರಿಯಾಗಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಇಂದು ಅಥವಾ ನಾಳೆ ಅಂತಿಮ ತೀರ್ಮಾನ  ಹೊರ ಬೀಳಲಿದೆ ಎಂದು ತಿಳಿಸಿದ್ದಾರೆ.

ಇಂದಿನಿಂದ ದೆಹಲಿಯಲ್ಲಿ ಕೇಂದ್ರ ಚುನಾವಣೆ ಸಮಿತಿ ಸಭೆ ಇದ್ದು, ಈ ಹಿನ್ನೆಲೆಯಲ್ಲಿ ನಾನು ದೆಹಲಿಗೆ ಹೋಗುತ್ತಿದ್ದೇನೆ. ದೆಹಲಿಯಲ್ಲಿ ಲೋಕಸಭೆ ಚುನಾವಣೆಯ ಕುರಿತು ಚರ್ಚೆ ನಡೆಯಲಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...