
ಭೋಪಾಲ್: ಕಾಂಗ್ರೆಸ್ ಪಕ್ಷ ದೇಶದಲ್ಲಿ ಅಧಿಕಾರಕ್ಕೆ ಬಂದರೆ ಧರ್ಮದ ಆಧಾರದ ಮೇಲೆ ಕ್ರಿಕೆಟ್ ತಂಡಕ್ಕೆ ಸದಸ್ಯರ ಆಯ್ಕೆ ನಡೆಯಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಮಧ್ಯಪ್ರದೇಶದ ಧಾರ್ ನಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಧರ್ಮದ ಆಧಾರದ ಮೇಲೆ ಕ್ರಿಕೆಟ್ ತಂಡಕ್ಕೆ ಆಯ್ಕೆ ನಡೆಯಲಿದೆ. ಏಕೆಂದರೆ ಅಲ್ಪಸಂಖ್ಯಾತರಿಗೆ ಕ್ರೀಡೆಯಲ್ಲಿ ಆದ್ಯತೆ ನೀಡಲು ಕಾಂಗ್ರೆಸ್ ಬಯಸಿದೆ ಎಂದು ಹೇಳಿದ್ದಾರೆ.
1947ರ ನಂತರ ದೇಶವನ್ನು ಮೂರು ಭಾಗವಾಗಿ ವಿಭಜಿಸುವ ಅಗತ್ಯವೇ ನಿಂತು ಇಡೀ ದೇಶವನ್ನು ಕಾಂಗ್ರೆಸ್ ಪಾಕಿಸ್ತಾನ ಎಂದು ಮಾಡಬಹುದು ಎಂದು ಅಲ್ಪಸಂಖ್ಯಾತರ ಒಲೈಕೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.