ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಮುರುಗನ್, ಯೂಟ್ಯೂಬ್ ನ್ಯೂಸ್ ಚಾನೆಲ್‌ಗಳಾದ ಬೋಲ್ಟಾ ಹಿಂದೂಸ್ತಾನ್ ಮತ್ತು ನ್ಯಾಷನಲ್ ದಸ್ತಕ್ ಸೇರಿದಂತೆ ಡಿಜಿಟಲ್ ಮಾಧ್ಯಮದಲ್ಲಿ ಸುದ್ದಿ ಮತ್ತು ಪ್ರಚಲಿತ ವಿದ್ಯಮಾನಗಳ ಪ್ರಕಾಶಕರು ಐಟಿ ನಿಯಮಗಳು, 2021, ಭಾಗ-III ರ ನಿಬಂಧನೆಗಳ ಅಡಿಯಲ್ಲಿ ಒಳಗೊಳ್ಳುತ್ತಾರೆ ಎಂದರು.
ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆ, ಭಾರತದ ರಕ್ಷಣೆ, ರಾಜ್ಯದ ಭದ್ರತೆ, ವಿದೇಶಿ ರಾಜ್ಯಗಳೊಂದಿಗೆ ಸೌಹಾರ್ದ ಸಂಬಂಧ ಅಥವಾ ಸಾರ್ವಜನಿಕ ಸುವ್ಯವಸ್ಥೆ ಅಥವಾ ಹಿತದೃಷ್ಟಿಯಿಂದ ಅಂತಹ ವಿಷಯಗಳಿಗೆ ಸಂಬಂಧಿಸಿದಂತೆ ಯಾವುದೇ ಅಪರಾಧದ ಪ್ರಚೋದನೆಯನ್ನು ತಡೆಗಟ್ಟಲುವಿಷಯವನ್ನು ನಿರ್ಬಂಧಿಸಲು ಯಾವುದೇ ಸರ್ಕಾರಿ ಸಂಸ್ಥೆ ಅಥವಾ ಮಧ್ಯವರ್ತಿಗಳಿಗೆ ನಿರ್ದೇಶನಗಳನ್ನು ನೀಡಲು ನಿಯಮಗಳು ಕೇಂದ್ರ ಸರ್ಕಾರಕ್ಕೆ ಅಧಿಕಾರ ನೀಡುತ್ತದೆ ಎಂದು ಅವರು ಹೇಳಿದರು.