ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಇನ್ನು ಮೂರು ವರ್ಷಗಳ ಕಾಲ ವಿಸ್ತರಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಇನ್ನು ಮೂರು ವರ್ಷಗಳ ಅವಧಿಗೆ ವಿಸ್ತರಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.
ಕೇಂದ್ರ ಸಚಿವ ಅನುರಾಗ್ ಠಾಕೂರ್ ಈ ಬಗ್ಗೆ ಮಾಹಿತಿ ನೀಡಿದ್ದು, 2021 ಮಾರ್ಚ್ ನಿಂದ 2024 ಮಾರ್ಚ್ ವರೆಗೆ ಯೋಜನೆ ವಿಸ್ತರಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ)ಯಡಿ 155.75 ಲಕ್ಷ ಮನೆಗಳನ್ನು ನಿರ್ಮಿಸಲಾಗುವುದು ಎಂದು ಹೇಳಲಾಗಿದೆ.