alex Certify ಹೆಣ್ಣು ಮಕ್ಕಳಿಗೆ ಕೇಂದ್ರ ಸರ್ಕಾರ ನೀಡ್ತಿದೆಯಾ 2 ಸಾವಿರ ರೂಪಾಯಿ…? ಇಲ್ಲಿದೆ ಸುದ್ದಿ ಹಿಂದಿನ ಅಸಲಿ ಸತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಣ್ಣು ಮಕ್ಕಳಿಗೆ ಕೇಂದ್ರ ಸರ್ಕಾರ ನೀಡ್ತಿದೆಯಾ 2 ಸಾವಿರ ರೂಪಾಯಿ…? ಇಲ್ಲಿದೆ ಸುದ್ದಿ ಹಿಂದಿನ ಅಸಲಿ ಸತ್ಯ

ಹೆಣ್ಣು ಮಕ್ಕಳಿಗಾಗಿ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಶಿಕ್ಷಣ, ವಿವಾಹ ಸೇರಿದಂತೆ ಎಲ್ಲ ಸಂದರ್ಭದಲ್ಲಿ ಆರ್ಥಿಕ ನೆರವು ನೀಡುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಶುರು ಮಾಡಿದೆ.

ಈ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ಪ್ರಧಾನ ಮಂತ್ರಿ ಕನ್ಯಾ ಆಶೀರ್ವಾದ್ ಯೋಜನೆ ಅಡಿಯಲ್ಲಿ ಹೆಣ್ಣು ಮಕ್ಕಳಿಗೆ 2000 ರೂಪಾಯಿಗಳನ್ನು ನೀಡಲಾಗ್ತಿದೆ ಎಂಬ ಸುದ್ದಿಯೊಂದು ಹರಿದಾಡ್ತಿದೆ.

ಪ್ರಧಾನ ಮಂತ್ರಿ ಕನ್ಯಾ ಆಶೀರ್ವಾದ್ ಯೋಜನೆ ಅಡಿಯಲ್ಲಿ, ಕೇಂದ್ರ ಸರ್ಕಾರದಿಂದ ಪ್ರತಿ ತಿಂಗಳು ಹೆಣ್ಣು ಮಕ್ಕಳಿಗೆ 2 ಸಾವಿರ ರೂಪಾಯಿ ನೀಡುತ್ತಿದೆ ಎಂಬ ಸುದ್ದಿ ಹರಿದಾಡ್ತಿದೆ. ಹೆಣ್ಣು ಮಕ್ಕಳ ಖಾತೆಗೆ ಹಣ ವರ್ಗಾವಣೆ ಮಾಡಲಾಗ್ತಿದೆ ಎಂದು ಯುಟ್ಯೂಬ್ ಚಾನೆಲ್ ಒಂದು ಸುದ್ದಿ ಬಿತ್ತರಿಸಿದೆ.

ಈ ಸುದ್ದಿ ಬಗ್ಗೆ ಪಿಐಬಿ ಫ್ಯಾಕ್ಟ್ ಚೆಕ್ ಟ್ವೀಟ್ ಮಾಡಿದೆ. ಇದು ಸುಳ್ಳು ಸುದ್ದಿ ಎಂದು ಪಿಐಬಿ ಹೇಳಿದೆ. ಸರ್ಕಾರ ಅಂತಹ ಯಾವುದೇ ಯೋಜನೆಯನ್ನು ನಡೆಸುತ್ತಿಲ್ಲ. ಈ ಸುದ್ದಿ ಸಂಪೂರ್ಣವಾಗಿ ಸುಳ್ಳು ಎಂದು ಪಿಐಬಿ ಹೇಳಿದೆ.

ಒಂದು ವೇಳೆ ಇಂಥ ಸುದ್ದಿಗಳು ನಿಮ್ಮ ಕಣ್ಣಿಗೆ ಬಿದ್ರೆ ನೀವು ಕೂಡ https://factcheck.pib.gov.in/ ಅಥವಾ whatsapp ಸಂಖ್ಯೆ +918799711259 ಅಥವಾ ಇಮೇಲ್: pibfactcheck@gmail.com. ಗೆ ಮಾಹಿತಿ ನೀಡಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...