
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಖಾರಿಫ್ ಬೆಳೆಗೆ ಭತ್ತದ ಬೆಂಬಲ ಬೆಲೆಯನ್ನು 100 ರೂ. ಗಳಷ್ಟು ಹೆಚ್ಚಳ ಮಾಡಿದ್ದು, ಇದರಿಂದಾಗಿ ಕ್ವಿಂಟಾಲ್ ಭತ್ತದ ಬೆಲೆ ಈಗ 2,040 ಆಗಿದೆ.
ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಟ್ವಿಟ್ಟರ್ ನಲ್ಲಿ ಈ ವಿಷಯ ತಿಳಿಸಿದ್ದಾರೆ.