
ನವದೆಹಲಿ: ತೆರಿಗೆ ಆದಾಯದಲ್ಲಿ ರಾಜ್ಯಗಳಿಗೆ ನೀಡುವ ಪಾಲನ್ನು ಕಡಿತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
ಆರ್ಥಿಕ ತಜ್ಞ ಅರವಿಂದ ಪನಾಗಾರಿಯಾ ನೇತೃತ್ವದ 16ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಸದ್ಯ ಇರುವ ಶೇಕಡ 41ರಷ್ಟು ಪಾಲನ್ನು ಶೇಕಡ 40ಕ್ಕೆ ತಗ್ಗಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇದು ಜಾರಿಗೆ ಬಂದಲ್ಲಿ ತೆರಿಗೆ ಹಂಚಿಕೆಗೆ ಸಂಬಂಧಿಸಿದ ಕೇಂದ್ರ ಮತ್ತು ರಾಜ್ಯಗಳ ಸಂಬಂಧ ಮತ್ತಷ್ಟು ಬಿಗಡಾಯಿಸಲಿದೆ. ಇದರೊಂದಿಗೆ ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಘರ್ಷ ಹೆಚ್ಚಾಗಬಹುದು ಎಂದು ಹೇಳಲಾಗಿದೆ.
ಈಗಾಗಲೇ ಅನೇಕ ರಾಜ್ಯಗಳು ತಮ್ಮ ತೆರಿಗೆ ಪಾಲನ್ನು ಪಡೆಯಲು ಕೋರ್ಟ್ ಮೊರೆ ಹೋಗಿವೆ. ಮುಂದಿನ ವರ್ಷದ ತೆರಿಗೆ ಸಂಗ್ರಹವನ್ನು ಗಮನದಲ್ಲಿರಿಸಿಕೊಂಡು ಶೇಕಡ 1ರಷ್ಟು ಕಡಿತ ಮಾಡುವುದರಿಂದ ಕೇಂದ್ರ ಸರ್ಕಾರದ ಆದಾಯ 35,000 ಕೋಟಿ ರೂ. ನಷ್ಟು ಹೆಚ್ಚಳವಾಗಲಿದೆ ಎಂದು ಹೇಳಲಾಗಿದೆ.