alex Certify ಬೆಳಗಾವಿ ವಿಮಾನ ನಿಲ್ದಾಣ ಹೊಸ ಟರ್ಮಿನಲ್ ಗೆ ಮೋದಿ ಶಂಕುಸ್ಥಾಪನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಗಾವಿ ವಿಮಾನ ನಿಲ್ದಾಣ ಹೊಸ ಟರ್ಮಿನಲ್ ಗೆ ಮೋದಿ ಶಂಕುಸ್ಥಾಪನೆ

ಬೆಳಗಾವಿ: ಕೇಂದ್ರ ಸರ್ಕಾರ ಕೇವಲ ಘೋಷಣೆಗೆ ಮಾತ್ರ ಸೀಮಿತವಲ್ಲ; ನಿರಂತರ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಾ ಬಂದಿದೆ. ದೇಶದಲ್ಲಿನ ವಿಮಾನ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸುವುದರ ಜೊತೆಗೆ ರೈಲ್ವೆ ನಿಲ್ದಾಣ, ರೈಲು ಮಾರ್ಗ ನಿರ್ಮಾಣ, ಹೊಸ ಶಿಕ್ಷಣ ನೀತಿ ಜಾರಿ, ಕಿಸಾನ್ ಸಮ್ಮಾನ ಯೋಜನೆ ಸೇರಿದಂತೆ ಸರ್ಕಾರ ದೇಶದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಬೆಳಗಾವಿ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಭಾನುವಾರ ನಡೆದ ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ನಿರ್ಮಾಣಕ್ಕೆ ವರ್ಚುವಲ್(ಆನ್ ಲೈನ್) ಮೂಲಕ ಶಂಕುಸ್ಥಾಪನಾ ನೆರವೇರಿಸಿ ಅವರು ಮಾತನಾಡಿದರು.

ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಆಜಂಘಡದಲ್ಲಿ ಬೆಳಗಾವಿ ವಿಮಾನ ನಿಲ್ದಾಣ ಸೇರಿದಂತೆ ದೇಶದಲ್ಲಿನ 15 ವಿಮಾನ ನಿಲ್ದಾಣಗಳ ಹೊಸ ಟರ್ಮಿನಲ್ ನಿರ್ಮಾಣಕ್ಕೆ ಏಕಕಾಲದಲ್ಲಿ ವರ್ಚುವಲ್ (ಆನ್ ಲೈನ್) ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.

ಇದಕ್ಕೂ ಮುಂಚೆ ಸ್ಥಳೀಯವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಬೆಂಗಳೂರು ಮತ್ತು ಮಂಗಳೂರು ನಂತರ ರಾಜ್ಯದಲ್ಲಿ ಬೆಳಗಾವಿ ಮೂರನೇ ಸ್ಥಾನದಲ್ಲಿದೆ. ಮುಂಬರುವ ದಿನಗಳಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ ಬಿಲ್ಡಿಂಗ್ ಪ್ರಾರಂಭಿಸಲಾಗಿದೆ.  ವಿಮಾನ ನಿಲ್ದಾಣದಲ್ಲಿ, ಲಿಫ್ಟ್, ಕಾರ್ ಪಾರ್ಕಿಂಗ್, ವಿಮಾನ ಲ್ಯಾಂಡಿಂಗ್ ರಸ್ತೆ ಅಗಲೀಕರಣ, ವಿಮಾನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವಿವಿಧ ಸೌಲಭ್ಯ ಕಲ್ಪಿಸಲಾಗುವುದು. ಅಂದಾಜು 350 ಕೋಟಿ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭಿಸಿಸಲು ಈಗಾಗಲೇ ಟೆಂಡರ್ ನೀಡಲಾಗಿದೆ. ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮಾದರಿಯಲ್ಲಿ ಬೆಳಗಾವಿಯಲ್ಲಿ ಕೂಡ ವಿಶೇಷ ವಿನ್ಯಾಸ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಕಿತ್ತೂರು ವಿಜಯೋತ್ಸವ 200 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಬೆಳಗಾವಿ ವಿಮಾನ ನಿಲ್ದಾಣ ಮುಂಭಾಗದಲ್ಲಿ ಐತಿಹಾಸಿಕ ಕಿತ್ತೂರು ರಾಣಿ ಚನ್ನಮ್ಮನ ಮೂರ್ತಿ ಪ್ರತಿಷ್ಠಾಪನೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಸಂಸದೆ ಮಂಗಳಾ ಅಂಗಡಿ ಮಾತನಾಡಿ, ವಿಮಾನ ನಿಲ್ದಾಣದಲ್ಲಿನ ರಸ್ತೆ ಅಗಲೀಕರಣ, ಪಾರ್ಕಿಂಗ್ ಜೊತೆಗೆ ಅತೀ ಹೆಚ್ಚು ವಿಮಾನ ಸಂಚಾರಕ್ಕೆ ಅನುಕೂಲವಾಗಲು ವ್ಯವಸ್ಥೆ ಕಲ್ಪಿಸಲಾಗುವುದು. ಮುಂಬರುವ ದಿನಗಳಲ್ಲಿ ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಬೆಳಗಾವಿ ಉತ್ತರ ವಿಧಾನಸಭಾ ಮತ ಕ್ಷೇತ್ರದ ಶಾಸಕ ಆಸೀಫ್(ರಾಜು) ಸೇಠ್, ದಕ್ಷಿಣ ಮತ ಕ್ಷೇತ್ರದ ಶಾಸಕ ಅಭಯ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ -2 ಪ್ರಕಾಶ ಹುಕ್ಕೇರಿ, ಮಹಾನಗರ ಪಾಲಿಕೆ ಮೇಯರ್ ಸವಿತಾ ಕಾಂಬಳೆ, ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...