ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಗೆ ಆಗಮಿಸಿದ್ದಾರೆ. ದೆಹಲಿಯ ಹೈದರಾಬಾದ್ ಹೌಸ್ ನಲ್ಲಿ ಭಾರತ-ರಷ್ಯಾ ದ್ವಿಪಕ್ಷೀಯ ಸಭೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪುಟಿನ್ ಸಮಾಲೋಚನೆ ನಡೆಸಲಿದ್ದಾರೆ.
21 ನೇ ವಾರ್ಷಿಕ ಭಾರತ –ರಷ್ಯಾ ಶೃಂಗಸಭೆಯಲ್ಲಿ ಭಾಗಿಯಾಗಲು ರಷ್ಯಾ ಅಧ್ಯಕ್ಷ ಪುಟಿನ್ ದೆಹಲಿಯಲ್ಲಿರುವ ಹೈದರಾಬಾದ್ ಹೌಸ್ ಗೆ ಆಗಮಿಸಿದ್ದಾರೆ. ಅವರನ್ನು ಪ್ರಧಾನಿ ಮೋದಿ ಬರಮಾಡಿಕೊಂಡಿದ್ದಾರೆ.
ಉಭಯ ನಾಯಕರ ಸಭೆಯಲ್ಲಿ ಇಂಧನ, ರಕ್ಷಣೆ, ವಾಣಿಜ್ಯ, ಬಂಡವಾಳ ಹೂಡಿಕೆ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ದ್ವಿಪಕ್ಷೀಯ ಒಪ್ಪಂದದ ಬಗ್ಗೆಯೂ ಮಹತ್ವದ ಚರ್ಚೆ ನಡೆಸಲಾಗಿದೆ.
ಪ್ರಧಾನಿ ಮೋದಿ, COVID ನಿಂದ ಎದುರಾದ ಸವಾಲುಗಳ ಹೊರತಾಗಿಯೂ, ಭಾರತ-ರಷ್ಯಾ ಸಂಬಂಧಗಳ ಬೆಳವಣಿಗೆಯ ವೇಗದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ನಮ್ಮ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯು ಪ್ರಬಲವಾಗುತ್ತಲೇ ಇದೆ ಎಂದು ಹೇಳಿದ್ದಾರೆ.