ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ.
ಇಸ್ರೇಲ್-ಪ್ಯಾಲೆಸ್ತೀನ್ ವಿಷಯದಲ್ಲಿ ಭಾರತದ ದೀರ್ಘಕಾಲೀನ “ತಾತ್ವಿಕ ನಿಲುವನ್ನು” ಪುನರುಚ್ಚರಿಸಿದ್ದಾರೆ.
ಅಬ್ಬಾಸ್ ಅವರೊಂದಿಗೆ ಫೋನ್ ಸಂಭಾಷಣೆಯಲ್ಲಿ ಭಯೋತ್ಪಾದನೆ, ಹಿಂಸಾಚಾರ ಮತ್ತು ಈ ಪ್ರದೇಶದಲ್ಲಿ ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿಯ ಬಗ್ಗೆ ಭಾರತದ ಕಳವಳ ಹಂಚಿಕೊಂಡಿದ್ದಾರೆ.
ಪ್ಯಾಲೆಸ್ತೀನ್ ಜನರಿಗೆ ಮಾನವೀಯ ನೆರವು ಕಳುಹಿಸುವುದನ್ನು ನವದೆಹಲಿ ಮುಂದುವರಿಸಲಿದೆ ಎಂದು ಪ್ರಧಾನಿ ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷರಿಗೆ ತಿಳಿಸಿದರು.
ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿ ಗಾಜಾದ ಅಲ್ ಅಹ್ಲಿ ಆಸ್ಪತ್ರೆಯಲ್ಲಿ ನಾಗರಿಕರ ಪ್ರಾಣಹಾನಿಗಾಗಿ ನನ್ನ ಸಂತಾಪವನ್ನು ತಿಳಿಸಿದ್ದೇನೆ. ನಾವು ಪ್ಯಾಲೇಸ್ಟಿನಿಯನ್ ಜನರಿಗೆ ಮಾನವೀಯ ನೆರವು ಕಳುಹಿಸುವುದನ್ನು ಮುಂದುವರಿಸುತ್ತೇವೆ. ಭಯೋತ್ಪಾದನೆ, ಹಿಂಸಾಚಾರ ಮತ್ತು ಈ ಪ್ರದೇಶದಲ್ಲಿ ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿಯ ಬಗ್ಗೆ ನಮ್ಮ ಆಳವಾದ ಕಳವಳವನ್ನು ಹಂಚಿಕೊಂಡಿದ್ದೇವೆ ಎಂದು ಮೋದಿ ಹೇಳಿದ್ದಾರೆ.