alex Certify ಮೋದಿ ಉಪನಾಮದ ಮಾನನಷ್ಟ ಕೇಸ್; ಖುದ್ದು ಹಾಜರಾಗುವಂತೆ ರಾಹುಲ್ ಗಾಂಧಿಗೆ ಬಿಹಾರ ಕೋರ್ಟ್ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೋದಿ ಉಪನಾಮದ ಮಾನನಷ್ಟ ಕೇಸ್; ಖುದ್ದು ಹಾಜರಾಗುವಂತೆ ರಾಹುಲ್ ಗಾಂಧಿಗೆ ಬಿಹಾರ ಕೋರ್ಟ್ ಸೂಚನೆ

ಮೋದಿ ಉಪನಾಮದ ಕುರಿತಾದ ಹೇಳಿಕೆಗೆ ಸಂಬಂಧಿಸಿದಂತೆ ಏಪ್ರಿಲ್ 25 ರಂದು ತನ್ನ ಮುಂದೆ ಹಾಜರಾಗುವಂತೆ ಬಿಹಾರದ ರಾಜಧಾನಿ ಪಾಟ್ನಾದ ನ್ಯಾಯಾಲಯವೊಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಸೂಚಿಸಿದೆ.

ಬಿಜೆಪಿಯ ರಾಜ್ಯಸಭಾ ಸಂಸದ ಮತ್ತು ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಪಾಟ್ನಾದ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಕೋರ್ಟ್ ನ ವಿಶೇಷ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆದಿ ದೇವ್ ಅವರು ಮಾರ್ಚ್ 18 ರಂದು ಆದೇಶವನ್ನು ನೀಡಿ, ಏಪ್ರಿಲ್ 12 ರಂದು ರಾಹುಲ್ ಗಾಂಧಿಯನ್ನು ತನ್ನ ಮುಂದೆ ಹಾಜರಾಗುವಂತೆ ತಿಳಿಸಿತ್ತು.

ಆದಾಗ್ಯೂ ಬುಧವಾರದ ವಿಚಾರಣೆಯ ಸಂದರ್ಭದಲ್ಲಿ ರಾಹುಲ್ ಪರ ವಕೀಲರು ವಾದಿಸಿ, ರಾಹುಲ್ ಗಾಂಧಿಯವರು ಸೂರತ್ ಪ್ರಕರಣದಲ್ಲಿ ನಿರತರಾಗಿದ್ದಾರೆ. ಹೀಗಾಗಿ ಮತ್ತೊಂದು ದಿನಾಂಕವನ್ನು ಸೂಚಿಸುವಂತೆ ಕೋರಿದರು.

ಇದಕ್ಕೆ ನ್ಯಾಯಾಧೀಶರು ಏಪ್ರಿಲ್ 25 ರಂದು ಪ್ರಕರಣದ ಮುಂದಿನ ವಿಚಾರಣೆಯ ದಿನಾಂಕದಂದು ನ್ಯಾಯಾಲಯಕ್ಕೆ ಭೌತಿಕ ಹಾಜರಾತಿಯನ್ನು ಖಚಿತಪಡಿಸಿಕೊಳ್ಳುವಂತೆ ರಾಹುಲ್ ಗಾಂಧಿ ಅವರ ವಕೀಲರನ್ನು ಕೇಳಿದರು.

ದೂರುದಾರರ ಕಡೆಯಿಂದ ಹೇಳಿಕೆಗಳನ್ನು ದಾಖಲಿಸಲಾಗಿದೆ ಮತ್ತು ನ್ಯಾಯಾಲಯಕ್ಕೆ ಎಲ್ಲಾ ಸಾಕ್ಷ್ಯಗಳನ್ನು ಸಲ್ಲಿಸಲಾಗಿದೆ. ಈಗ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಮಾತ್ರ ದಾಖಲಿಸಬೇಕಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲ ಪ್ರಿಯಾ ಗುಪ್ತಾ ಸುದ್ದಿಗಾರರಿಗೆ ತಿಳಿಸಿದರು.

ಆಪಾದಿತ ಹೇಳಿಕೆಗೆ ಸಂಬಂಧಿಸಿದಂತೆ ಸೂರತ್ ನ್ಯಾಯಾಲಯವು ಇತ್ತೀಚೆಗೆ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿತ್ತು. ನಂತರ ಅವರನ್ನು ಲೋಕಸಭೆಯ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಯಿತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...