alex Certify BIG NEWS: ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ದಾಖಲೆ ಬರೆದ ಮೊಹಮ್ಮದ್ ಶಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ದಾಖಲೆ ಬರೆದ ಮೊಹಮ್ಮದ್ ಶಮಿ

मोहम्मद शमी का बड़ा कारनामा, ICC Final में ये रिकॉर्ड बनाने वाले पहले भारतीय गेंदबाज बने

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಟೀಮ್ ಇಂಡಿಯಾದ ಫಾಸ್ಟ್ ಬೌಲರ್ ಮೊಹಮ್ಮದ್ ಶಮಿ ದಾಖಲೆ ಬರೆದಿದ್ದಾರೆ. ಮೊದಲ ಇನ್ನಿಂಗ್ಸ್ ನಲ್ಲಿ 4 ವಿಕೆಟ್‌ ಕಬಳಿಸುವ ಮೂಲಕ ಮೊಹಮ್ಮದ್ ಶಮಿ ಸಾಧನೆ ಮಾಡಿದ್ದಾರೆ.

ಟೆಸ್ಟ್ ಫೈನಲ್‌ನಲ್ಲಿ ಭಾರತ ಪರ 4 ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಮೊಹಮ್ಮದ್ ಶಮಿ ಪಾತ್ರರಾಗಿದ್ದಾರೆ. ಮೊಹಮ್ಮದ್ ಶಮಿ ಈ ವಿಷಯದಲ್ಲಿ ಮೊಹಿಂದರ್ ಅಮರನಾಥ್, ಜಹೀರ್ ಖಾನ್, ಆರ್.ಪಿ. ಸಿಂಗ್ ಮತ್ತು ಇರ್ಫಾನ್ ಪಠಾಣ್ ಅವರಂತಹ ದಿಗ್ಗಜ ಆಟಗಾರರನ್ನು ಹಿಂದಿಕ್ಕಿದ್ದಾರೆ. 1983 ರ ವಿಶ್ವಕಪ್ ಫೈನಲ್ ನಲ್ಲಿ ಮೊಹಿಂದರ್ ಅಮರನಾಥ್ 12 ರನ್ ಗಳಿಗೆ 3 ವಿಕೆಟ್ ಪಡೆದಿದ್ದರು.

ಇದರ ನಂತರ 2007 ರ ಟಿ 20 ವಿಶ್ವಕಪ್ ಫೈನಲ್‌ನಲ್ಲಿ ಇರ್ಫಾನ್ ಪಠಾಣ್ 16 ರನ್‌ಗಳಿಗೆ 3 ವಿಕೆಟ್ ಪಡೆದಿದ್ದರು. 2007 ರ ಟಿ 20 ವಿಶ್ವಕಪ್ ಫೈನಲ್‌ನಲ್ಲಿ ಆರ್.ಪಿ. ಸಿಂಗ್ 26 ರನ್‌ಗಳಿಗೆ 3 ವಿಕೆಟ್ ಕಬಳಿಸಿ ದಾಖಲೆ ಮಾಡಿದ್ದರು. 2000 ರಲ್ಲಿ ನಡೆದ ಐಸಿಸಿ ಏಕದಿನ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಭಾರತದ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ 27 ರನ್‌ಗಳಿಗೆ 3 ವಿಕೆಟ್ ಪಡೆದಿದ್ದರು. 2002 ರ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಹರ್ಭಜನ್ ಸಿಂಗ್ 27 ರನ್‌ಗಳಿಗೆ 3 ವಿಕೆಟ್ ಕಬಳಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...