ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ 6 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಹಿಳೆ ಬಳಸಿಕೊಂಡು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ 6 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮುಮ್ತಾಜ್ ಅಲಿ ಸಹೋದರ ಹೈದರ್ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ರೆಹಮತ್, ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶೋಯೆಬ್ ಹಾಗೂ ಸಿರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ. ಮುಮ್ತಾಜ್ ಅಲಿ ಸಮಾಜದ ಗೌರವಾನ್ವಿತ ವ್ಯಕ್ತಿ. ಅವರ ಗೌರವ ಹಾಳುಮಾಡಲೆಂದು ಮಹಿಳೆ ಬಳಸಿಕೊಂಡು ಷಡ್ಯಂತ್ರ ಮಾಡುತ್ತಿದ್ದಾರೆ. ರೆಹಮತ್ ಜೊತೆ ಅಕ್ರಮ ಸಂಬಂಧವಿದೆ ಎಂದು ಬೆದರಿಕೆ ಹಾಕುತ್ತಿದ್ದಾರೆ. 2024ರ ಜುಲೈನಿಂದ ಈವರೆಗೆ 50 ಲಕ್ಷ ರೂಪಾಯಿ ವಸೂಲಿ ಮಾಡಿದ್ದಾರೆ. ಚೆಕ್ ಮೂಲಕವೂ ಮಹಿಳೆ 25 ಲಕ್ಷ ರೂಪಾಯಿ ಹಣ ಪಡೆದಿದ್ದಾಳೆ. ಸತ್ತಾರ್ ಎಂಬಾತ ಮುಮ್ತಾಜ್ ರಾಜಕೀಯ ವಿರೋಧಿ. ಅಕ್ರಮ ಸಂಬಂಧವಿದೆ ಎಂದು ನಿರಂತರವಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾನೆ. ಹೀಗಾಗಿ ಮುಮ್ತಾಜ್ ಮೆಸೇಜ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ ಎಂದು ದೂರು ದಾಖಲಿಸಿದ್ದಾರೆ.