ಬೆಂಗಳೂರು: ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಅಡಕೆಗೆ ಎಲೆ ಚುಕ್ಕಿ ರೋಗ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ 4 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.
ರೋಗ ನಿಯಂತ್ರಣಕ್ಕೆ ಒಟ್ಟು 8 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ರೈತರಿಗೆ ಪರಿಹಾರ ನೀಡಲು 4 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ ಜಿಲ್ಲೆಯಲ್ಲಿ ಎಲೆ ಚುಕ್ಕಿ ರೋಗ ಹಬ್ಬಿದೆ,
20,000 ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕಿ ರೋಗ ಕಾಣಿಸಿಕೊಂಡಿದೆ. ಸರ್ಕಾರದಿಂದ ರೈತರಿಗೆ ಪ್ರತಿ ಹೆಕ್ಟೇರ್ ಗೆ 4000 ರೂ. ಪರಿಹಾರ ನೀಡಲಾಗುವುದು. ರೋಗಕ್ಕೆ ಸಿಂಪಡಿಸುವ ಔಷಧವನ್ನು ಬೆಳೆಗಾರರಿಗೆ ಉಚಿತವಾಗಿ ನೀಡಲಾಗುವುದು ಎಂದು ಹೇಳಲಾಗಿದೆ.