
ಬೆಂಗಳೂರು: ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ 3661 ಕೋಟಿ ರೂಪಾಯಿ ಅನುದಾನ ನೀಡಲಾಗಿದ್ದು, ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಸರ್ಕಾರದಿಂದ ಬಂಪರ್ ಅನುದಾನ ನೀಡಲಾಗಿದೆ.
15 ಬಿಜೆಪಿ ಶಾಸಕರ ಕ್ಷೇತ್ರಗಳಿಗೆ 2718 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. 12 ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ 833 ಕೋಟಿ ರೂಪಾಯಿ ಅನುದಾನ ನೀಡಿದ್ದು, ಒಬ್ಬರು ಜೆಡಿಎಸ್ ಶಾಸಕರ ಒಂದು ಕ್ಷೇತ್ರಕ್ಕೆ 110 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಎನ್ನಲಾಗಿದೆ.