
ಬೆಂಗಳೂರು: ಬೆಂಗಳೂರಿನಲ್ಲಿ 1.9 ಕೋಟಿ ರೂ. ನಗದು ವಶಕ್ಕೆ ಪಡೆಯಲಾಗಿದೆ. ಚುನಾವಣೆಯಲ್ಲಿ ಮತದಾರರಿಗೆ ಹಣವನ್ನು ಹಂಚಲು ತರಲಾಗಿತ್ತು ಎಂಬ ಮಾಹಿತಿ ದೊರೆತಿದ್ದು, ಸಿಸಿಬಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಅಕ್ಕಿಪೇಟೆಯ ಬಾಲಾಜಿ ಮೆಡಿಕಲ್ಸ್ ಬಳಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ಮತದಾರರಿಗೆ ಹಂಚಲು ಹಣ ಸಾಗಿಸುತ್ತಿದ್ದ ಮಾಹಿತಿ ಗೊತ್ತಾಗಿದೆ. ಹಣ ಜಪ್ತಿ ಮಾಡಿದ ಸಿಸಿಬಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.