
ಬೆಂಗಳೂರು: ಮಠ, ಮಂದಿರಗಳು, ಸಂಘ-ಸಂಸ್ಥೆಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ಸರ್ಕಾರ 23.95 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ.
55 ಮಠಗಳು, 81 ದೇವಾಲಯಗಳು, 25 ಸಂಘ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ವೀರಶೈವ ಲಿಂಗಾಯಿತ ಪಂಚಮಸಾಲಿ ಮಠಕ್ಕೆ ಅನುದಾನ ರಿಲೀಸ್ ಮಾಡಲಾಗಿದೆ.
ಕೆಲವು ತಿಂಗಳ ಹಿಂದೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಆಲಗೂರು ಗ್ರಾಮದಲ್ಲಿ ಸ್ಥಾಪನೆಯಾದ ವೀರಶೈವ ಪಂಚಮಸಾಲಿ ಸಮಾಜದ ಮೂರನೇ ಪೀಠಕ್ಕೆ ಅನುದಾನ ನೀಡಲಾಗಿದೆ. ವೀರಶೈವ ಲಿಂಗಾಯಿತ ಪಂಚಮಸಾಲಿ ಸ್ವಾಮೀಜಿಗಳ ಒಕ್ಕೂಟದ ಟ್ರಸ್ಟ್ ಅಡಿಯಲ್ಲಿ ಮೂರನೇ ಪೀಠ ಸ್ಥಾಪನೆಯಾಗಿದೆ.
ವೀರಶೈವ ಲಿಂಗಾಯತ ಪಂಚಮಸಾಲಿ ಸ್ವಾಮೀಜಿಗಳ ಒಕ್ಕೂಟದ ಸದಸ್ಯರಾಗಿರುವ ಸ್ವಾಮೀಜಿಗಳ ಮಠಗಳಿಗೆ ಅನುದಾನ ನೀಡಲಾಗಿದೆ. ಒಕ್ಕೂಟದ 20ಕ್ಕೂ ಹೆಚ್ಚು ಮಠಗಳಿಗೆ 20 ಲಕ್ಷ ರೂಪಾಯಿ ಅನುದಾನ ನೀಡಲಾಗಿದೆ.