
ಬೆಂಗಳೂರು: ವೆಬ್ ಸೈಟ್ ಹ್ಯಾಕ್ ಮಾಡಿ ಹಣ ವರ್ಗಾವಣೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಎಸ್ಐಟಿ ಅಧಿಕಾರಿಗಳು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ನಾಗಪುರದ ನಿತಿನ್ ಮೆಶ್ರಾಮ್, ದರ್ಶಿತ್ ಪಟೇಲ್ ಬಂಧಿತ ಆರೋಪಿಗಳು. ಬಂಧಿತರು ಇ-ಪ್ರೊಕ್ಯೂರ್ ಮೆಂಟ್ ವೆಬ್ ಸೈಟ್ ಹ್ಯಾಕ್ ಮಾಡಿ 11.5 ಕೋಟಿ ರೂಪಾಯಿ ವಂಚಿಸಿದ್ದರು.
ಬಂಧಿತರಿಗೆ ಹ್ಯಾಕರ್ ಶ್ರೀಕಿ ಜೊತೆ ನಂಟಿತ್ತು. ಶ್ರೀಕಿ ವೆಬ್ ಸೈಟ್ ಹ್ಯಾಕ್ ಮಾಡಿ ಬರೋಬ್ಬರಿ 11.5 ಕೋಟಿ ರೂಪಾಯಿ ಲೂಟಿ ಮಾಡಿದ್ದ. ಹೀಗೆ ಲೂಟಿ ಮಾಡಿದ್ದ ಹಣವನ್ನು ಉತರ ಭಾರತದ ಕೆಲ ವ್ಯಕ್ತಿಗಳ ಖಾತೆಗೆ ಹಾಕಿದ್ದ. ಹೀಗೆ ಖಾತೆಗೆ ಹಣ ಹಾಕಿಸಿಕೊಂಡವರಲ್ಲಿ ನಿತಿನ್, ದರ್ಶಿತ್ ಕೂಡ ಇದ್ದರು ಎನ್ನಲಾಗಿದೆ.