ಬೆಂಗಳೂರು: ರಾಜ್ಯದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಆತಂಕ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಶಂಕಿತ ಪ್ರಕರಣಗಳು ವರದಿಯಾದಲ್ಲಿ ಚಿಕಿತ್ಸೆ ನೀಡಲು ಸೂಚನೆ ನೀಡಲಾಗಿದೆ.
ಆರೋಗ್ಯ ಇಲಾಖೆಯಿಂದ ಎಲ್ಲಾ ಜಿಲ್ಲಾ ಸರ್ಜನ್ ಗಳಿಗೆ ಸೂಚನೆ ನೀಡಿದ್ದು, ಜಿಲ್ಲಾಸ್ಪತ್ರೆಗಳಲ್ಲಿ ಕನಿಷ್ಠ ಎರಡು ಬೆಡ್ ಗಳನ್ನು ಮೀಸಲಿಡಬೇಕೆಂದು ತಿಳಿಸಲಾಗಿದೆ.
ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ ಜಿಲ್ಲೆಯ ಡಿಎಸ್ಒ ಗಳು ಆರೋಗ್ಯಧಿಕಾರಿ ಜೊತೆ ಸಮನ್ವಯ ಸಾಧಿಸಿ ಸ್ಕ್ರೀನಿಂಗ್ ನಡೆಸಬೇಕು. ಏರ್ಪೋಟ್ ನಲ್ಲಿ ಸ್ಕ್ರೀನಿಂಗ್ ನಡೆಸಬೇಕು. ಶಂಕಿತ ಪ್ರಕರಣಗಳು ವರದಿಯಾದಲ್ಲಿ ಪ್ರತ್ಯೇಕಿಸಿ ಚಿಕಿತ್ಸೆ ನೀಡಬೇಕು. ಬೆಂಗಳೂರಿನ ಇಂದಿರಾನಗರದ ಸಾಂಕ್ರಾಮಿಕ ರೋಗ ಆಸ್ಪತ್ರೆ, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕೆಂದು ಹೇಳಲಾಗಿದೆ. ನೋಡಲ್ ಅಧಿಕಾರಿಯಾಗಿ ಡಾ. ಎನ್. ಶ್ರೀನಿವಾಸ್ ಅವರನ್ನು ಆರೋಗ್ಯ ಇಲಾಖೆ ನೇಮಕ ಮಾಡಿದೆ.