ಬೆಂಗಳೂರು: ಭಾರತದಲ್ಲಿಯೂ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದೆ. ಪ್ರಮುಖವಾಗಿ ಕರ್ನಾಟಕ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.
ಏರ್ ಪೋರ್ಟ್ ಗಳಲ್ಲಿ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮಂಕಿಪಾಕ್ಸ್ ಶಂಕಿತರ ಚಿಕಿತ್ಸೆಗಾಗಿ ಬೆಂಗಳೂರಿನ ಇಂದಿರಾನಗರ ಆಸ್ಪತ್ರೆ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತೆಗಳನ್ನು ಗುರುತಿಸಲಾಗಿದೆ.
ಮಂಕಿಪಾಕ್ಸ್ ಕಂಡುಬಂದಲ್ಲಿ 21 ದಿನಗಳ ಕಾಲ ಕ್ವಾರಂಟೈನ್ ಮಾಡಬೇಕು ಎಂದು ಖಡಕ್ ಸೂಚನೆ ನೀಡಿದೆ.
ವಿಮಾನ ನಿಲ್ದಾಣಗಳು, ಬಂದರು ಹಾಗೂ ರಾಜ್ಯದ ಎಲ್ಲಾ ಕಡೆಗಳಲ್ಲಿ ನಿಗಾವಹಿಸುವಂತೆ ವ್ಯವಸ್ಥಾಪಕ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಂಕಿತರನ್ನು ಗುರುತಿಸಿ ಸ್ಕ್ರೀನಿಂಗ್ ಮಾಡುವಂತೆ ಹಾಗೂ ಅಂತರಾಷ್ಟ್ರೀಯ ಪ್ರಯಾಣಿಕರನ್ನು ತಪಾಸಣೆ ನಡೆಸುವಂತೆ ಆರೋಗ್ಯ ಇಲಖೆ ಆಯುಕ್ತ ರಂದೀಪ್ ತಿಳಿಸಿದ್ದಾರೆ.