ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮತ್ತೆ ಮುಂಗಾರು ಚುರುಕುಗೊಳ್ಳಲಿದ್ದು, ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ, , ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಹಾವೇರಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ರಾಜ್ಯದ ಹಲವು ಕಡೆ ಮತ್ತೆ ಮುಂಗಾರು ಚುರುಕಾಗಿರಲಿದ್ದು, ದಕ್ಷಿಣ ಕನ್ನಡ ಜಿಲ್ಲೆ ಸೇರಿ ಹಲವು ಕಡೆ ಮಳೆಯಾಗಲಿದೆ.
ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಬೆಂಗಳೂರು ನಗರದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.