alex Certify ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಸೃಷ್ಟಿ: ಫೆ. 2ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ | Rain Alert | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಸೃಷ್ಟಿ: ಫೆ. 2ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ | Rain Alert

ಬೆಂಗಳೂರು: ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯ ಕೆಲವು ಕಡೆ ಫೆಬ್ರವರಿ 2ರಿಂದ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಸೃಷ್ಟಿಯಾಗಿದ್ದು, ರಾಜ್ಯದಲ್ಲಿ ಫೆಬ್ರವರಿ 2ರಿಂದ ಮತ್ತೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹೇಳಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಧಾರವಾಡ, ಬೆಳಗಾವಿಯಲ್ಲಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದ ಕೆಲವು ಭಾಗಗಳಲ್ಲಿ ಫೆಬ್ರವರಿ 4ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯ ಮೋಡಗಳು ಸೃಷ್ಟಿಯಾಗಿರುವುದರಿಂದ ರಾಜಧಾನಿ ಬೆಂಗಳೂರು ಸೇರಿ ಹಲವು ಕಡೆ ಕನಿಷ್ಠ ಉಷ್ಣಾಂಶದಲ್ಲಿ ಏರಿಕೆಯಾಗಿದೆ. ಕೆಲವೆಡೆ ಚಳಿಯ ತೀವ್ರತೆ ಕಡಿಮೆಯಾಗತೊಡಗಿದೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...