ಬೆಂಗಳೂರು: ತಾಪಮಾನ ಹೆಚ್ಚಳ, ರಣಬಿಸಿಲ ಹೊಡೆತಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಈ ಬಾರಿ ಅವಧಿಗೂ ಮುನ್ನವೇ ಮುಂಗಾರು ಆಗಮನವಾಗಲಿದೆ ಎಂದು ಸ್ಕೈ ಮೆಟ್ ವರದಿ ನೀಡಿದೆ.
ಹಿಂದೂ ಮಹಾಸಾಗರದಲ್ಲಿ ಇಂಡಿಯನ್ ಓಷನ್ ಡೈಪೋಲ್ ಅಥವಾ ಒಐಡಿ ಅಥವಾ ಲಾ ನಿನಾ ಪರಿಸ್ಥಿತಿಗಳು ಮಳೆಗೆ ಕಾರಣವಗಬಹುದು. ಹೀಗಾಗಿ ಈ ಬಾರಿ ಅವಧಿಗೂ ಮುನ್ನ ಮುಂಗಾರು ಆರಂಭವಾಗಲಿದೆ ಎಂದು ಸ್ಕೈ ಮೆಟ್ ತಿಳಿಸಿದೆ. ಆದರೆ ಭಾರತೀಯ ಹವಾಮಾನ ಇಲಾಖೆ ಈ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.
ದಕ್ಷಿಣ, ಪಶ್ಚಿಮ ಮತ್ತು ವಾಯುವ್ಯ ಪ್ರದೇಶಗಳಲ್ಲಿ ಸಾಕಷ್ಟು ಮಳೆಯಾಗಲಿದೆ. ಮಹಾರಾಷ್ಟ್ರ, ಮಧ್ಯಪ್ರದೇಶಗಳಲ್ಲಿ ಮುಂಗಾರು ಹೆಚ್ಚಿರಲಿದೆ. ಬಿಹಾರ, ಜಾರ್ಖಂಡ್, ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಜುಲೈ, ಆಗಸ್ಟ್ ತಿಂಗಳಲ್ಲಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ.
ಎಲ್ ನಿನೊ ಹಾಗೂ ಲಾ ನಿನಾ ಪೆಸಿಫಿಕ್ ಮಹಾಸಾಗರದಲ್ಲಿ ಹವಾಮಾನದ ಮಾದರಿಗಳಾಗಿದ್ದು, ಇವು ಪ್ರಪಂಚದಾದ್ಯಂತ ಹವಾಮಾನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಈಶಾನ್ಯ ರಾಜ್ಯಗಳಲ್ಲಿ ಮಳೆಗಾಲದ ಆರಂಭದಲ್ಲಿ ಮಳೆ ಕೊರತೆ ಕಾಣಲಿದೆ. ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಮಳೆ ಜೂನ್, ಜುಲೈ ತಿಂಗಳಲ್ಲಿ ಶುರುವಾಗಲಿದೆ. ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯನ್ನು ನಿರೀಕ್ಷಿಸಬಹುದಾಗಿದೆ.
ಆಗಸ್ಟ್, ಸೆಪ್ಟೆಂಬರ್ ನಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದೆ. ಜೀನ್ ನಿಂದ ಸೆಪ್ಟೆಂಬರ್ ನಡುವೆ ಮುಂಗಾರು ಮಳೆ ಸಹಜವಾಗಿರಲಿದೆ ಎಂದು ತಿಳಿಸಿದೆ.