ಬೆಂಗಳೂರು : ಜೂನ್ 10 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದ್ದು, ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಬರಗಾಲ ಮರೆಯಾಗುವ ಎಲ್ಲ ಸೂಚನೆಗಳು ಕಂಡುಬರುತ್ತಿವೆ. ಜೂನ್ 10ರ ಬಳಿಕ ಮುಂಗಾರು ಪ್ರವೇಶಿಸಲಿದ್ದು, ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ನಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 1 ವಾರ ಭಾರಿ ಮಳೆ
ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಒಂದು ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 20ರಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ
ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮತ್ತೊಂದೆಡೆ ಉತ್ತರ ಕನ್ನಡ, ಹಾವೇರಿ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ