alex Certify ರೈತರಿಗೆ ಸಿಹಿ ಸುದ್ದಿ: ನಾಡಿದ್ದು ರಾಜ್ಯಕ್ಕೆ ನೈಋತ್ಯ ಮುಂಗಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಸಿಹಿ ಸುದ್ದಿ: ನಾಡಿದ್ದು ರಾಜ್ಯಕ್ಕೆ ನೈಋತ್ಯ ಮುಂಗಾರು

ಬೆಂಗಳೂರು: ನೈಋತ್ಯ ಮುಂಗಾರು ಕೇರಳಕ್ಕೆ ಭಾನುವಾರ ಪ್ರವೇಶಿಸಿದ್ದು, ಜೂನ್ 1 ರಿಂದ ರಾಜ್ಯಕ್ಕೆ ಎಂಟ್ರಿ ಕೊಡಲಿದೆ. ಜೂನ್ 2 ರಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಮತ್ತು ಪಶ್ಚಿಮಘಟ್ಟದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ವಾಡಿಕೆಗಿಂತ ಮೊದಲೇ ಕೇರಳಕ್ಕೆ ಮುಂಗಾರು ಕಾಲಿಟ್ಟಿದ್ದು, ನಂತರದ ನಾಲ್ಕೈದು ದಿನಗಳಲ್ಲಿ ರಾಜ್ಯಕ್ಕೆ ಪ್ರವೇಶಿಸುತ್ತದೆ. ಈ ಬಾರಿ ಜೂನ್ ಮೊದಲವಾರದಲ್ಲಿ ರಾಜ್ಯಾದ್ಯಂತ ಮುಂಗಾರು ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಬಾರಿ ಉತ್ತಮ ಮುಂಗಾರು ನಿರೀಕ್ಷೆಯಿದ್ದು, ಜೂನ್ 2ರಂದು ಕರಾವಳಿಯ ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ ಮತ್ತು ಪಶ್ಚಿಮ ಘಟ್ಟ ಪ್ರದೇಶದ ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...