ನವದೆಹಲಿ: ಪ್ರಸಕ್ತ ಸಾಲಿನಲ್ಲಿ ಜೂನ್ 1 ರಂದು ಮುಂಗಾರು ಮಾರುತಗಳು ಕೇರಳ ಪ್ರವೇಶಿಸಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಬಾರಿ ವಾಡಿಕೆಯಂತೆ ಸಕಾಲದಲ್ಲಿ ನೈಋತ್ಯ ಮುಂಗಾರು ದೇಶವನ್ನು ಪ್ರವೇಶಿಸಲಿದ್ದು, ಮೇ 15 ರ ನಂತರ ವಿಸ್ತೃತ ವರದಿ ಪ್ರಕಟಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಗೋಳದಲ್ಲಿ ಮುಂಗಾರು ಮಾರುತಕ್ಕೆ ಪೂರಕವಾದ ವಾತಾವರಣ ಸೃಷ್ಟಿಯಾಗಿದೆ. ಇದರಿಂದಾಗಿ ಸಕಾಲಕ್ಕೆ ಉತ್ತಮ ಮಳೆಯಾಗಲಿದೆ ಕೊರತೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಜೂನ್ ನಿಂದ ಸೆಪ್ಟೆಂಬರ್ ವರೆಗೆ ಒಟ್ಟು ಮಳೆ ಪ್ರಮಾಣದಲ್ಲಿ ಶೇಕಡ 70 ರಷ್ಟು ಮಳೆಯಾಗಲಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.