ಬೆಂಗಳೂರು : ಕೇರಳ ಪ್ರವೇಶಿಸಿರುವ ಮುಂಗಾರು(Monsoon) ಮಾರುತಗಳು ರಾಜ್ಯಕ್ಕೆ ಇಂದು ಪ್ರವೇಶಿಸಲಿದ್ದು, ಈ ಜಿಲ್ಲೆಗಳಲ್ಲಿ 2 ದಿನ ಭಾರಿ ಮಳೆ ಮುನ್ಸೂಚನೆ ನೀಡಿದೆ.
ರಾಜ್ಯಕ್ಕೆ ಇಂದು ಮುಂಗಾರು ಪ್ರವೇಶಿಸಲಿದ್ದು, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಚಾಮರಾಜನಗರ, ಹಾವೇರಿ, ರಾಯಚೂರು, ಕೊಪ್ಪಳ, ಮಂಡ್ಯ, ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಮುಂದಿನ 5 ದಿನ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ(Meteorological Department) ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಕೂಡ ಎರಡು ದಿನ ಭಾರೀ ‘ಮಳೆ’ ಯಾಗಲಿದ್ದು, ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಅಲರ್ಟ್ ಘೋಷಿಸಲಾಗಿದೆ. ಪ್ರವಾಸಿಗರಿಗೆ ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.