ಕಾರವಾರ: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದರೂ ಗೆಲುವು ಜಿಲ್ಲೆಗಳಲ್ಲಿ ಮಳೆ ಕೊರತೆ ಕಂಡು ಬಂದಿದೆ. ಜುಲೈ ಕೊನೆಯ ವಾರದವರೆಗೆ ಕಾದು ನೋಡಿ ಮೋಡ ಬಿತ್ತನೆ ಬಗ್ಗೆ ಚಿಂತನೆ ನಡೆಸುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ. ಅಧಿಕಾರಿಗಳಿಗೆ ಚುರುಕು ಮುಟ್ಟಿಸಲಾಗಿದೆ. ಕರಾವಳಿ ಭಾಗದಲ್ಲಿ ಮಳೆಯಿಂದ ಭಾರಿ ನಷ್ಟವಾಗಿದ್ದು, ರಾಜ್ಯದಲ್ಲಿ ಮಳೆಯಿಂದ 21 ಜನ ಹಾಗೂ 40ಕ್ಕೂ ಹೆಚ್ಚು ಜಾನುವಾರು ಮೃತಪಟ್ಟಿವೆ. ಅನೇಕ ಮನೆಗಳಿಗೆ ಹಾನಿಯಾಗಿದ್ದು, ಮನೆ ನಿರ್ಮಿಸಿ ಕೊಡಲಾಗುವುದು ಎಂದು ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿಯಲ್ಲಿ ಪ್ರವಾಹಕ್ಕೆ ಬಲಿಯಾದ ಸತೀಶ್ ನಾಯಕ ಮತ್ತು ಉಲ್ಲಾಸ ಗಾವಳಿ ಅವರ ಮನೆಗಳಿಗೆ ತೆರಳಿದ ಸಚಿವರು ಎರಡೂ ಕುಟುಂಬದವರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.