
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪ್ರವೇಶ ಬೆನ್ನಲ್ಲೇ ಮಳೆಯ ಆರ್ಭಟ ಹೆಚ್ಚಾಗುವ ನಿರೀಕ್ಷೆ ಇದೆ. ಜೂನ್ 2ರಿಂದ 7ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗಲಿದ್ದು, ಇದೆ ಅವಧಿಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 3 ಮತ್ತು 4ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂನ್ 1ರಿಂದ 3ರವರೆಗೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಜೂನ್ 4ರಿಂದ 7ರವರೆಗೆ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹೇಳಲಾಗಿದೆ.