ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಮಲೆನಾಡು, ಕರಾವಳಿ ಪ್ರದೇಶದ ಜಿಲ್ಲೆಗಳಲ್ಲಿ ಎರಡು ದಿನ ಹೆಚ್ಚಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಸೆ. 10, 11 ರಂದು ಭಾರೀ ಮಳೆ ಆಗುವ ಸಂಭವ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗುವ ಸಂಭವ ಇದೆ. ಮುಂಗಾರು ಪೂರ್ಣಗೊಳ್ಳಲು 20 ದಿನಗಳಿದ್ದು, ಹಂತ ಹಂತವಾಗಿ ಮಳೆ ಕ್ಷೀಣವಾಗುತ್ತಿದೆ. ಅಕ್ಟೋಬರ್ 1ರಿಂದ ಹಿಂಗಾರು ಆರಂಭವಾಗಲಿದೆ.