alex Certify ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಮುಖ್ಯ ಮಾಹಿತಿ: ರಾಜ್ಯದಲ್ಲಿ ಇನ್ನೂ ಒಂದು ವಾರ ಮುಂಗಾರು ದುರ್ಬಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಮುಖ್ಯ ಮಾಹಿತಿ: ರಾಜ್ಯದಲ್ಲಿ ಇನ್ನೂ ಒಂದು ವಾರ ಮುಂಗಾರು ದುರ್ಬಲ

ಬೆಂಗಳೂರು: ಮಳೆಗಾಗಿ ಕಾಯುತ್ತಿರುವ ರೈತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ರಾಜ್ಯದಲ್ಲಿ ಇನ್ನೂ ಒಂದು ವಾರ ಮುಂಗಾರು ದುರ್ಬಲವಾಗಿರುತ್ತದೆ.

ಹವಾಮಾನ ಇಲಾಖೆ ಈ ಕುರಿತು ಮುನ್ಸೂಚನೆ ನೀಡಿದ್ದು, ಆಗಸ್ಟ್ 7ರಿಂದ 13ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಿದೆ.

ಭಾನುವಾರ ಬೆಳಿಗ್ಗೆಯವರೆಗೆ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿದ್ದ ದಕ್ಷಿಣ ಮುಂಗಾರು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...