alex Certify BIG NEWS: ಜುಲೈ 20 ರಿಂದ ಸಂಸತ್ ಮುಂಗಾರು ಅಧಿವೇಶನ; ‘ಏಕರೂಪ ನಾಗರಿಕ ಸಂಹಿತೆ’ ಮಸೂದೆ ಮಂಡನೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜುಲೈ 20 ರಿಂದ ಸಂಸತ್ ಮುಂಗಾರು ಅಧಿವೇಶನ; ‘ಏಕರೂಪ ನಾಗರಿಕ ಸಂಹಿತೆ’ ಮಸೂದೆ ಮಂಡನೆ ಸಾಧ್ಯತೆ

ಈ ಬಾರಿಯ ಸಂಸತ್ ಮುಂಗಾರು ಅಧಿವೇಶನ ಜುಲೈ 20 ರಿಂದ ಆಗಸ್ಟ್ 11ರವರೆಗೆ ನಡೆಯಲಿದ್ದು, ಮಹತ್ವದ ‘ಏಕರೂಪ ನಾಗರಿಕ ಸಂಹಿತೆ’ ಮಸೂದೆಯನ್ನು ಈ ಬಾರಿಯ ಅಧಿವೇಶನದಲ್ಲೇ ಕೇಂದ್ರ ಸರ್ಕಾರ ಮಂಡನೆ ಮಾಡುವ ಸಾಧ್ಯತೆ ಇದೆ.

ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಸೇರಿದಂತೆ ಕೆಲವೊಂದು ಮಸೂದೆಗಳನ್ನು ಮಂಡಿಸಲು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ.

ಇದರ ಮಧ್ಯೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ಹೋರಾಟ ನಡೆಸಲು ಮುಂದಾಗಿರುವ ಪ್ರತಿಪಕ್ಷಗಳು, ಏಕರೂಪ ನಾಗರಿಕ ಸಂಹಿತೆ ಸೇರಿದಂತೆ ಕೇಂದ್ರ ಸರ್ಕಾರದ ಹಲವು ನೀತಿಗಳ ಕುರಿತು ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪ್ರಶ್ನಿಸಲು ತಯಾರಿ ನಡೆಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...