ಬೆಂಗಳೂರು: ಮುಂಗಾರು ಕೈ ಕೊಟ್ಟಿದ್ದರಿಂದ ಬೆಳೆ ಹಾಳಾಗಿ ಕಂಗಾಲಾದ ರೈತರು ಉತ್ತಮ ಹಿಂಗಾರು ನಿರೀಕ್ಷೆಯಲ್ಲಿದ್ದಾರೆ.
ಆದರೆ, ಉತ್ತಮ ಹಿಂಗಾರು ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್ ಆಗಿದೆ. ರಾಜ್ಯದಲ್ಲಿ ಹಿಂಗಾರು ದುರ್ಬಲವಾಗಿದೆ. ಮುಂದಿನ ಒಂದು ವಾರ ಹಲವು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 3ರಿಂದ 9 ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅಕ್ಟೋಬರ್ 3ರಿಂದ 6 ರವರೆಗೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದ್ದು. ಅ. 7ರಿಂದ 9ರವರೆಗೆ ಒಣಹವೆ ಇರಲಿದೆ.
ಉತ್ತರ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಅ. 3ರಿಂದ 9ರವರೆಗೆ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.