ಮಂಗಳೂರು: ಕಡಲನಗರಿ ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ. ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಯುವಕರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೊಟ್ಟಾರ ಎಂಬಲ್ಲಿ ತಡರಾತ್ರಿ ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿಯರು ನಿಂತಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಭಜರಂಗದಳ ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಹೋಟೆಲ್ ಗೆ ಊಟಕ್ಕಾಗಿ ಬಂದಿರುವುದಾಗಿ ಯುವಕ-ಯುವತಿಯರು ತಿಳಿಸಿದ್ದಾರೆ. ಮಧ್ಯರಾತ್ರಿ ಯಾವ ಹೋಟೆಲ್ ತೆರೆದಿದೆ ಎಂದು ಪ್ರಶ್ನಿಸಿ ಕಾರ್ಯಕರ್ತರು ಹಲ್ಲೆಗೆ ಮುಂದಾಗಿದ್ದಾರೆ.
ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಊರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.