
ಬೆಂಗಳೂರು: ಬೆಂಗಳೂರಿನಲ್ಲಿ ಪಬ್ ಗೆ ನುಗ್ಗೆ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ. ಕರ್ನಾಟಕ ಕಾರ್ಮಿಕರ ಪರಿಷತ್ ಸಂಘಟನೆಯಿಂದ ದಾಳಿಗೆ ಯತ್ನ ನಡೆಸಲಾಗಿದೆ.
ಸುಮಾರು 15 ಜನರ ತಂಡ ಡೋಲು ಬಡಿದುಕೊಂಡು ಬಂದಿದ್ದು, ಬ್ರಿಗೇಡ್ ರಸ್ತೆಯಲ್ಲಿರುವ ಪಬ್ ಗೆ ನುಗ್ಗಿ ದಾಳಿಗೆ ಯತ್ನಿಸಿದೆ. ತಡೆಯಲು ಬಂದ ಬೌನ್ಸರ್ಸ್ ಮತ್ತು ಸಂಘಟನೆಯ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ನಂತರ ಬೌನ್ಸರ್ಸ್ ಮತ್ತು ಸಂಘಟನೆಯ ಸದಸ್ಯರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಶೋಕನಗರ ಠಾಣೆ ಪೋಲೀಸರು ಭೇಟಿ ನೀಡಿ ನೈತಿಕ ಪೊಲೀಸ್ ಗಿರಿ ನಡೆಸುತ್ತಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.