BIG NEWS: ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ; ಮೂವರು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ಪಣಂಬೂರು ಬೀಚ್ ಬಳಿ ಅನ್ಯಕೋಮಿನ ಯುವಕ-ಯುವತಿಯನ್ನು ತಡೆದು ವಿಚಾರಣೆ ಮಾಡಿ ಕಿರಿಕ್ ಮಾಡಿದ್ದಾರೆ. ಈ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ.

ಮಂಗಳೂರು ಹೊರವಲಯದ ಪಣಂಬೂರು ಬೀಚ್ ಗೆ ಕೇರಳ ಮೂಲದ ಯುವಕ ಹಾಗೂ ಬೆಂಗಳೂರು ಮೂಲದ ಯುವತಿ ಆಗಮಿಸಿದ್ದರು. ಈ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಯುವಕ-ಯುವತಿಯನ್ನು ತಡೆದು ಗಲಾಟೆ ಮಾಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಪಣಂಬೂರು ಪೊಲೀಸರು ಮೂರು ಜನ ರಾಮ ಸೇನೆ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read