alex Certify BIG NEWS: ದಕ್ಷಿಣ ಕನ್ನಡದಲ್ಲಿ ನೈತಿಕ ಪೊಲೀಸ್ ಗಿರಿ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಕ್ಷಿಣ ಕನ್ನಡದಲ್ಲಿ ನೈತಿಕ ಪೊಲೀಸ್ ಗಿರಿ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅನ್ಯಕೋಮಿನ ಯುವಕನೊಂದಿಗೆ ಯುವತಿ ಸುತ್ತಾಟ ನಡೆಸಿದ್ದ ಹಿನ್ನೆಲೆಯಲ್ಲಿ ಯುವಕ-ಯುವತಿಯನ್ನು ಅಡ್ಡಗಟ್ಟಿ ಆರೋಪಿಗಳು ತರಾಟೆಗೆ ತೆಗೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ ದಾಖಲಾಗಿತ್ತು.

ಮಂಕಿ ಸ್ಟ್ಯಾಂಡ್ ನ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಬೇರೆ ಬೇರೆ ಕೋಮಿನ ಜೋಡಿ ಬೈಕ್ ಗಳಲ್ಲಿ ಸುತ್ತಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಯುವಕ-ಯುವತಿ ಬೈಕ್ ನಲ್ಲಿ ತೆರಳುತ್ತಿದ್ದಾಗ ರಸೆ ಮಧ್ಯೆ ಬೈಕ್ ತಡೆದು ಇಬ್ಬರು ಆರೋಪಿಗಳು ಬೆದರಿಕೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣದಡಿ ಇಬ್ಬರು ಆರೋಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...