ರಾಜ್ಯದ ವಸತಿ ಶಾಲೆಗಳಲ್ಲಿ 6ರಿಂದ 10ನೇ ತರಗತಿಯವರೆಗೆ ಉಚಿತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯೊಂದು ಇಲ್ಲಿದೆ.
ಮುಂದಿನ ಶೈಕ್ಷಣಿಕ ವರ್ಷದಿಂದ ಉಚಿತ ಶಿಕ್ಷಣವನ್ನು ಪಿಯುಸಿ ವರೆಗೆ ವಿಸ್ತರಿಸುವ ಉದ್ದೇಶ ಹೊಂದಲಾಗಿದ್ದು, ಹೀಗಾಗಿ ಈ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ತೀರ್ಮಾನಿಸಲಾಗಿದೆ.
ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ಈ ವಿಷಯ ತಿಳಿಸಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ 530 ವಸತಿ ಶಾಲೆಗಳಲ್ಲಿ ಪಿಯುಸಿ ವರೆಗೆ ಉಚಿತ ಶಿಕ್ಷಣ ನೀಡಲಾಗುತ್ತದೆ ಎಂದಿದ್ದಾರೆ
ಇದರಿಂದಾಗಿ ವಸತಿ ಶಾಲೆಯಲ್ಲಿ ಕಲಿಯುತ್ತಿರುವ ರಾಜ್ಯದ 40,000 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಸಚಿವರು ಹೇಳಿದ್ದಾರೆ.