alex Certify JOB ALERT : ಮೊರಾರ್ಜಿ ವಸತಿ ಶಾಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಮೊರಾರ್ಜಿ ವಸತಿ ಶಾಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸಕ್ತ ಸಾಲಿಗೆ ಬಳ್ಳಾರಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕೊಳಗಲ್ಲು ಮತ್ತು ಬಿಐಟಿಎಂ ಹತ್ತಿರದ ಅಲ್ಲಿಪುರ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.

ಕನ್ನಡ, ಇಂಗ್ಲೀಷ್, ಉರ್ದು, ಗಣಿತ ಮತ್ತು ಸಮಾಜ ವಿಜ್ಞಾನ ವಿಷಯಗಳಿಗೆ ಬಿ.ಎ, ಬಿ.ಇಡಿ, ಬಿ.ಎಸ್.ಸಿ, ಬಿ..ಇ.ಡಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಜೂನ್ 26ರ ಒಳಗಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕೊಳಗಲ್ಲು ಮತ್ತು ಬಿಐಟಿಎಂ ಹತ್ತಿರದ ಅಲ್ಲಿಪುರ ಶಾಲೆಗಳ ಪ್ರಾಂಶುಪಾಲರ ಮೊ:7353346069 ಅಥವಾ ನಗರದ ಜೋಳದರಾಶಿ ರಂಗಮಂದಿರ ಬಳಿಯ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕಚೇರಿಯ ದೂ:08392200125 ಇವರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...