ಕೋಲಾರ: ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಯಲುವನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಲಾಗಿದೆ. ಗುಂಡಿಗೆ ಇಳಿದ ಎಲ್ಲಾ ಮಕ್ಕಳು ಪರಿಶಿಷ್ಟ ಸಮುದಾಯಕ್ಕೆ ಸೇರಿದವರು ಎಂದು ಹೇಳಲಾಗಿದೆ.
ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕ ಅಭಿಷೇಕ್, ವಾರ್ಡನ್ ಮಂಜುನಾಥ್ ಸೇರಿದಂತೆ ಹಲವು ಶಿಕ್ಷಕರು ಮಕ್ಕಳಿಗೆ ಕಿರುಕುಳ ನೀಡುತ್ತಿದ್ದಾರೆ. ಮಕ್ಕಳನ್ನು ಹೊಡೆಯುವುದು, ರಾತ್ರಿ ವೇಳೆ ಬ್ಯಾಗ್ ಹೊರಿಸಿ ಕೂರಿಸುವುದು ಸೇರಿದಿ ಹಲವು ರೀತಿಯಲ್ಲಿ ಕಿರುಕುಳ ನೀಡುತ್ತಿದ್ದಾರೆ.
ಪ್ರಾಂಶುಪಾಲರ ಎದುರಲ್ಲೇ ಸಿಬ್ಬಂದಿಗಳು ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ್ದಾರೆ. ಮಾಹಿತಿ ತಿಳಿದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 250 ಜನ ಮಕ್ಕಳಿರುವ ವಸತಿ ಶಾಲೆಯಲ್ಲಿ ಶಿಕ್ಷಕರು ಕಿರುಕುಳ ನೀಡುತ್ತಿರುವುದಾಗಿ ಪೋಷಕರು ಆರೋಪಿಸಿದ್ದಾರೆ.