ಬೀದರ್ : ಪ್ರಾಂಶುಪಾಲರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ 20 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ದೂರು ನೀಡಿದ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಹಳ್ಳಿಖೇಡ (ಕೆ) ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.
ಶಾಲೆಯ ಪ್ರಾಂಶುಪಾಲ ನಾಗಶೆಟ್ಟಿ ವಿರುದ್ಧ ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಈ ಕುರಿತು ಶಾಲೆಯ 20 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಪ್ರಾಂಶುಪಾಲರು ವಿದ್ಯಾರ್ಥಿನಿಯರ ಜೊತೆ ಅನುಚಿತವಾಗಿ ನಡೆದುಕೊಂಡಿದ್ದಾರೆ. ವಿದ್ಯಾರ್ಥಿನಿಯೊಬ್ಬಳಿಗೆ ಮುತ್ತು ಕೊಟ್ಟಿದ್ದಾರೆ, ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿನಿಯರು ಪತ್ರದ ಮೂಲಕ ಆಗ್ರಹಿಸಿದ್ದಾರೆ. ಘಟನೆ ಸಂಬಂಧ ಪೋಷಕರು ತೀವ್ರ ಆಕ್ರೋಶ ವ್ಯಕ್ಯಪಡಿಸಿದ್ದಾರೆ.
ಸಾಂದರ್ಭಿಕ ಚಿತ್ರ