ಬೆಂಗಳೂರು : ರಾಜ್ಯ ಸರ್ಕಾರ ಇಂಧನ ವಲಯಕ್ಕೆ ಹೆಚ್ಚಿನ ಬಂಡವಾಳ ಹೂಡಲು ಸಜ್ಜಾಗಿದ್ದು, 32,000 ಮೆಗಾ ವ್ಯಾಟ್ನಿಂದ 60,000 ಕ್ಕೆ ಹೆಚ್ಚಿಸಲು ಕ್ರಮ ಕೈಗೊಂಡಿದೆ.
ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕವು ಸ್ವಾವಲಂಬಿಯಾಗಿದೆ. ಮುಂದಿನ 7 ವರ್ಷಗಳಲ್ಲಿ ಇಂಧನ ವಲಯಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸಿ ಈಗಿರುವ ಸ್ಥಾಪಿತ ಸಾಮರ್ಥ್ಯವನ್ನು 32,000 ಮೆಗಾ ವ್ಯಾಟ್ನಿಂದ 60,000 ಮೆಗಾ ವ್ಯಾಟ್ಗೆ ಹೆಚ್ಚಿಸಲು ಕ್ರಮ ವಹಿಸಲಾಗಿದೆ.
ವರ್ಷಕ್ಕೆ 4000 ಮೆಗಾ ವ್ಯಾಟ್ ಸಾಮರ್ಥ್ಯದ ವಿದ್ಯುತ್ ಉತ್ಪಾದನೆ ರಾಜ್ಯ ಸರ್ಕಾರದ ಗುರಿಯಾಗಿದೆ. ನವೀಕರಿಸಬಹುದಾದ ಇಂಧನ ಮೂಲಗಳಿಂದ ಶೇ.63 ರಷ್ಟು ಇಂಧನ ಉತ್ಪಾದನೆಯಾಗುತ್ತಿದ್ದು, ಈ ವಲಯದಲ್ಲಿ ಇನ್ನಷ್ಟು ಖಾಸಗಿ ಹೂಡಿಕೆಗೆ ಉತ್ತೇಜನ ನೀಡಲಾಗುತ್ತಿದೆ ಎಂದು ಸರ್ಕಾರ ಪ್ರಕಟಣೆ ತಿಳಿಸಿದೆ.