ಬೆಂಗಳೂರು : ಮಾನವ-ಆನೆ ಸಂಘರ್ಷ ತಗ್ಗಿಸಲು ವರ್ಷಕ್ಕೆ 150 ಕೋಟಿಗೂ ಹೆಚ್ಚು ಹಣ ವ್ಯಯಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಶ್ವ ಆನೆ ದಿನದ ಅಂಗವಾಗಿ ಬೆಂಗಳೂರಿನ ಜಿಕೆವಿಕೆಯಲ್ಲಿ ʻಮಾನವ-ಆನೆ ಸಂಘರ್ಷ ನಿರ್ವಹಣೆʼ ವಿಷಯ ಕುರಿತು ನಡೆದ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಮಾನವ-ಆನೆ ಸಂಘರ್ಷ ತಗ್ಗಿಸಲು ವಾರ್ಷಿಕ 150 ಕೋಟಿಗೂ ಹೆಚ್ಚು ಹಣ ವ್ಯಯಿಸಲಾಗುತ್ತಿದೆ. ಈ ಅನುದಾನವನ್ನು, 300 ಕಿಲೋಮೀಟರ್ಗಿಂತಲೂ ಹೆಚ್ಚು ರೈಲ್ವೇ ಬ್ಯಾರಿಕೇಡ್ಗಳು, 800 ಕಿಲೋಮೀಟರ್ಗಳಷ್ಟು ವ್ಯಾಪಿಸಿರುವ ಸೌರ ಬೇಲಿಗಳು, ಸೌರ ಟೆಂಟಕಲ್ ಬೇಲಿಗಳು ಮತ್ತು ಆನೆ ತಡೆ ಕಂದಕಗಳನ್ನು ನಿರ್ಮಿಸಲು ಬಳಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.